ರಾಹುಲ್ ಗಾಂಧಿಗೆ ನಿಂದನೆ, ಯತ್ನಾಳ್ ವಿರುದ್ಧ ತನಿಖೆ ನಡೆಸಿ : ಎಸ್.ಮನೋಹರ್

Update: 2024-09-17 16:52 GMT

ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅತ್ಯಂತ ಕೀಳು ಹಾಗೂ ವೈಯಕ್ತಿಕ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಕೂಡಲೇ ಅವರ ವಿರುದ್ಧ ತನಿಖೆ ನಡೆಸಿ ಬಂಧಿಸಬೇಕು ಎಂದು ಎಸ್.ಮನೋಹರ್ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‍ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯಕ್ಕಾಗಿ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ದ ಟೀಕೆ ನಡೆಸುತ್ತಿರುತ್ತಾರೆ. ಆದರೆ ರಾಹುಲ್ ಗಾಂಧಿ ರವರ ಬಗ್ಗೆ ಈಗಾಗಲೇ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಪೊಲೀಸ್ ಇಲಾಖೆ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ಅವರು ಕಾನೂನು ಬಹಿರ ಹಾಗೂ ವೈಯಕ್ತಿಕವಾಗಿ ರಾಹುಲ್ ಗಾಂಧಿ ವಿರುದ್ಧ ನಿಂದನೆ ಹಾಗೂ ಟೀಕೆಯನ್ನು ಮಾಡಿದ್ದಾರೆ. ಇದು ಕಾನೂನು ಸುವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಲು ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಿ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News