ಉಪನೋಂದಣಾಧಿಕಾರಿಗಳಿಂದ ನೋಂದಣಿ ಸ್ಥಗಿತ : ವದಂತಿ ಕುರಿತು ಸ್ಪಷ್ಟನೆ

Update: 2024-10-22 16:06 GMT

ಬೆಂಗಳೂರು: ರಿಜಿಸ್ಟ್ರೇಷನ್ ಕಾಯ್ದೆ 1908ರ ನಿಯಮ 22(8) ತಿದ್ದುಪಡಿ ವಿರೋಧಿಸಿ ಉಪ ನೋಂದಣಾಧಿಕಾರಿಗಳು ನೋಂದಣಿ ಸ್ಥಗಿತಗೊಳಿಸಿರುವುದಾಗಿ ಸಾಮಾಜಿಕ ಜಾಲತಾಣ ಮತ್ತು ಮಾದ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತ ಕೆ.ಎ.ದಯಾನಂದ ವದಂತಿಯನ್ನು ನಿರಾಕರಿಸಿ ಸ್ಪಷ್ಟೀಕರಣ ನೀಡಿದ್ದಾರೆ.

ಅ.21 ರಂದು ರಿಜಿಸ್ಟ್ರೇಷನ್ ಕಾಯ್ದೆ 1908ರ ನಿಯಮ 22(ಬಿ) ತಿದ್ದುಪಡಿ ವಿರೋದಿಸಿ ಐದಾರು ಉಪ ನೋಂದಣಾಧಿಕಾರಿಗಳು ನೋಂದಣಿಯನ್ನು ಕೆಲಕಾಲ ಸ್ಥಗಿತಗೊಳಿಸಿದ್ದು ಸರಿಯಿದೆ. ಆದರೆ, ನಂತರ ಉಪ ನೋಂದಣಾಧಿಕಾರಿಗಳೊಂದಿಗೆ ಚರ್ಚಿಸಿ ನೋಂದಣಿ ಕಾರ್ಯ ಎಂದಿನಂತೆಯೇ ಮುಂದುವರೆಸಲು ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಯಾವುದೇ ಸಮಸ್ಯೆ ಇಲ್ಲ. ಯಾರೇ ನೋಂದಣಿ ಮಾಡಿಸಿಕೊಳ್ಳಲು ಇಚ್ಛಿಸುವವರು ನೋಂದಣಿ ಮಾಡಿಸಬಹುದು ಎಂದು ದಯಾನಂದ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News