ಆಸ್ಪತ್ರೆಗಳಲ್ಲಿ ಶೇ.60ರಷ್ಟು ಕನ್ನಡಿಗರ ನೇಮಕಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯ

Update: 2024-12-03 17:08 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿದೆ.

ಆಸ್ಪತ್ರೆಗಳಲ್ಲಿ ಭಾಗಶಃ ನರ್ಸ್ ಹಾಗೂ ವೈದ್ಯರುಗಳಿಗೆ ಕನ್ನಡ ಬರುತ್ತಿಲ್ಲ. ಆರೋಗ್ಯದ ಸಮಸ್ಯೆ ಬಗ್ಗೆ ಎಲ್ಲರಿಗೂ ಇಂಗ್ಲೀಷ್‌ ನಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಇದರಿಂದ ವೈದ್ಯರಿಗೆ ರೋಗಿಗಳ ಸಮಸ್ಯೆ ಏನೆಂಬುದು ಸರಿಯಾಗಿ ತಿಳಿಯದೇ ಯಡವಟ್ಟುಗಳಾಗುತ್ತಿವೆ. ಹೀಗಾಗಿ ಪ್ರಾದೇಶಿಕ ಭಾಷೆಯ ಜನರಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದರಿಂದ ರೋಗಿಗಳ ಆರೋಗ್ಯಕ್ಕೂ ಒಳಿತು. ಆಸ್ಪತ್ರೆಗಳಲ್ಲಿ ಕನ್ನಡಿಗರಿಗೆ ಒತ್ತು ನೀಡಲು ಆರೋಗ್ಯ ಇಲಾಖೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರದಲ್ಲಿ ಉಲ್ಲೇಖಿಸಿದೆ.

ಇತ್ತೀಚೆಗೆ ಐಟಿ-ಬಿಟಿ ಕಂಪೆನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿತ್ತು. ಇದೀಗ ಆಸ್ಪತ್ರೆಗಳಲ್ಲಿಯೂ ಕನ್ನಡ ಸಿಬ್ಬಂದಿಗಳ ಕಡ್ಡಾಯಗೊಳಿಸಲು ಮುಂದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News