ಬೆಂಗಳೂರು | ಗಾಂಜಾ ಸಾಗಾಟ; 8 ಮಂದಿಯ ಬಂಧನ, 86 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ
Update: 2024-12-27 14:33 GMT
ಬೆಂಗಳೂರು : ಅಕ್ರಮ ಮಾದಕ ವಸ್ತು ಗಾಂಜಾ ಸಾಗಾಟ ಆರೋಪ ಪ್ರಕರಣ ಸಂಬಂಧ 8 ಜನರನ್ನು ಬಂಧಿಸಿರುವ ರಾಜ್ಯ ರೈಲ್ವೆ ಪೊಲೀಸರು, 86 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ರೈಲುಗಳ ಮೂಲಕ ನಗರಕ್ಕೆ ಗಾಂಜಾ ಪೂರೈಸುತ್ತಿದ್ದ ಪ್ರತ್ಯೇಕ 5 ಪ್ರಕರಣಗಳಲ್ಲಿ 8 ಜನರನ್ನು ರಾಜ್ಯ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಸರಿಸುಮಾರು 86 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿರುವುದಾಗಿ ರಾಜ್ಯ ರೈಲ್ವೆ ಪೊಲೀಸ್ ಎಸ್‍ಪಿ ಡಾ. ಸೌಮ್ಯಲತಾ ಎಸ್.ಕೆ. ಮಾಹಿತಿ ನೀಡಿದ್ದಾರೆ.