ಬೆಂಗಳೂರು : ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪೋಸ್ಟರ್ ಅಭಿಯಾನ

Update: 2024-12-31 13:36 GMT

ಬೆಂಗಳೂರು : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಮಂಗಳವಾರ ನಗರದಲ್ಲಿ ಪೋಸ್ಟರ್ ಅಂಟಿಸುವ ಅಭಿಯಾನ ನಡೆಸಲಾಯಿತು.

ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧಿಕ್ಕಾರ, ಪ್ರಿಯಾಂಕ್ ಖರ್ಗೆ ದಬ್ಬಾಳಿಕೆಗೆ ಧಿಕ್ಕಾರ ಎಂದು ಬಿಜೆಪಿ ನಾಯಕರು, ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಮುಖಂಡರಾದ ಜಗದೀಶ್ ಹಿರೇಮನಿ, ಉಮೇಶ್ ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ ಕೆಡೆಂಜಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಆಂದೋಲನದಲ್ಲಿ ಭಾಗವಹಿಸಿದ್ದರು. ಪೋಸ್ಟರ್ ಅಂಟಿಸುವ ಅಭಿಯಾನದಲ್ಲಿ ತೊಡಗಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News