ಬೆಂಗಳೂರು | ಸೆಂಟ್ರಿಂಗ್‌ಗೆ ಬಳಸಿದ್ದ ಮರದ ಕಂಬ ಬಿದ್ದು ವಿದ್ಯಾರ್ಥಿನಿ ಮೃತ್ಯು

Update: 2025-01-05 09:58 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್‌ಗೆ ಬಳಸಿದ್ದ ಮರದ ಕಂಬ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಬಸವನಗುಡಿ ನ್ಯಾಷನಲ್‌ ಕಾಲೇಜು ಬಳಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ತೇಜಸ್ವಿನಿ(15) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ನಿರ್ಲಕ್ಷ್ಯ ವಹಿಸಿದ ಆರೋಪದಡಿ ಕಟ್ಟಡದ ಮಾಲೀಕರ ವಿರುದ್ಧ ವಿ.ವಿ ಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಮೃತ ಬಾಲಕಿ, ಖಾಸಗಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಶನಿವಾರ ಮಧ್ಯಾಹ್ನ ಶಾಲೆ ಮುಗಿಸಿ, ನಡೆದು ಮನೆಯತ್ತ ತೆರಳುತ್ತಿದ್ದಳು. ಆಗ ಮರದ ಕಂಬ ವಿದ್ಯಾರ್ಥಿನಿಯ ತಲೆಯ ಮೇಲೆ ಬಿದ್ದಿದೆ. ಸ್ಥಳದಲ್ಲಿದ್ದವರು ವಿದ್ಯಾರ್ಥಿನಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮೃತಪಟ್ಟಿದ್ದಾಳೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News