ಮಾ.17ಕ್ಕೆ ‘ಯುವ ಸಂಕಲ್ಪ’ ಸಮಾವೇಶ; ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ
Update: 2025-03-15 22:41 IST

ಬೆಂಗಳೂರು : ಯುವ ಕಾಂಗ್ರೆಸ್ ನೂತನ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಸೇರಿದಂತೆ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ‘ಯುವ ಸಂಕಲ್ಪ ಸಮಾವೇಶ’ ಮಾ.17ರ ಬೆಳಗ್ಗೆ 10:30ಕ್ಕೆ ನಗರದ ಅರಮನೆ ಮೈದಾನದಲ್ಲಿನ ಗಾಯತ್ರಿ ವಿಹಾರ(ಗೇಟ್ ನಂ-4) ಸಭಾಂಗಣದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಯುವ ಕಾಂಗ್ರೆಸ್‍ನ ರಾಷ್ಟ್ರೀಯಾಧ್ಯಕ್ಷ ಉದಯ್ ಬಾನು ಚಿಬ್, ಮುಖಂಡರಾದ ಬಿ.ವಿ.ಶ್ರೀನಿವಾಸ್, ರಾಜ್ಯಸಭಾ ಸದಸ್ಯರು, ಸಂಸದರು, ಸಚಿವರು, ಪಕ್ಷದ ಶಾಸಕರು ಸೇರಿದಂತೆ ಮುಖಂಡರು ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.