ಸಾಧಕಿ ಅನನ್ಯಾ ಪ್ರಸಾದ್‍ಗೆ ಶುಭ ಹಾರೈಸಿದ ಮುಖ್ಯಮಂತ್ರಿ
Update: 2025-03-15 22:44 IST

ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ದಾಖಲೆಗೈದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಮೊಮ್ಮಗಳು ಅನನ್ಯಾ ಪ್ರಸಾದ್ ಶನಿವಾರ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅನನ್ಯಾ ಅವರಿಗೆ ಮುಖ್ಯಮಂತ್ರಿ ಶುಭ ಹಾರೈಸಿದರು.
ಅಲ್ಲದೇ, ಅನಾಥ ಮಕ್ಕಳಿಗೆ ಶಿಕ್ಷಣ ನೀಡುವ ಚಾಮರಾಜನಗರ-ರಾಮಸಮುದ್ರದ ದೀನಬಂಧು ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯಾ ಪ್ರಸಾದ್ ಅವರ ಕಾಳಜಿಯನ್ನು ಮೆಚ್ಚಿ ಮುಖ್ಯಮಂತ್ರಿ ಶ್ಲಾಘಿಸಿದರು.