ಬೆಂಗಳೂರು | ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ: ಮತ್ತೋರ್ವ ಬಂಧನ
Update: 2025-03-28 18:07 IST
ಸಾಂದರ್ಭಿಕ ಚಿತ್ರ | PC : freepik.com
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಮತ್ತೋರ್ವ ಆರೋಪಿಯನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಬಂಧಿಸಿದೆ.
ಉದ್ಯಮಿ ಸಾಹಿಲ್ ಸಕಾರಿಯ ಜೈನ್ ಎಂಬಾತನನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿದೆ.
ಕಳ್ಳಸಾಗಣೆ ಮಾಡಿದ ಚಿನ್ನವನ್ನು ಮಾರಾಟ ಮಾಡಲು ರನ್ಯಾ ರಾವ್‍ಗೆ ಸಹಾಯ ಮಾಡಿದ ಆರೋಪದ ಮೇಲೆ ಸಾಹಿಲ್ ಜೈನ್‍ನನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ.ಇನ್ನೂ, ಮಾ.29ರವರೆಗೂ ಕಸ್ಟಡಿಗೆ ತೆಗೆದುಕೊಂಡು ಪ್ರಕರಣ ಕುರಿತು ಹೆಚ್ಚಿನ ತನಿಖೆ ಕೈಗೊಳ್ಳಲಿದ್ದಾರೆ
ಏನಿದು ಪ್ರಕರಣ?: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪ ಪ್ರಕರಣ ಸಂಬಂಧ ಮಾ.3ರಂದು ಎಮಿರೇಟ್ಸ್ ಏರ್‍ಲೈನ್ಸ್ ಮೂಲಕ ದುಬೈನಿಂದ ಬೆಂಗಳೂರಿಗೆ ಬಂದಿಳಿದ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು.