ಬೆಂಗಳೂರು | ರವಿವಾರದಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
Update: 2025-04-04 22:30 IST

ಬೆಂಗಳೂರು : ರಾಮ ನವಮಿ ಹಬ್ಬದ ಪ್ರಯುಕ್ತ ರವಿವಾರದಂದು(ಎ.6) ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ.