ಬೆಂಗಳೂರು : ಕಾಲೇಜು ಕ್ಯಾಂಪಸ್ ನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಮೆ
Update: 2024-01-31 14:32 GMT
ಬೆಂಗಳೂರು: ನಗರದ ಹೊಸರೋಡ್ ಬಳಿಯ ಖಾಸಗಿ ಕಾಲೇಜು ಕ್ಯಾಂಪಸ್‍ನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಮೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಜ.30ರ ರಾತ್ರಿ ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಘ್ನೇಶ್ ಕೆ.(19) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿ ಆಗಿರುವ ವಿದ್ಯಾರ್ಥಿ ವಿಘ್ನೇಶ್.ಕೆ(19) ಖಾಸಗಿ ಕಾಲೇಜಿನಲ್ಲಿ ಬಿಬಿಎ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದನು. ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ವಿದ್ಯಾರ್ಥಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಗರದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳವನ್ನು ಪರಿಶೀಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.