ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯ

Update: 2024-07-09 17:59 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡ ಘಟನೆ ನಗರದ ಕೆ.ಎಸ್.ಲೇಔಟ್ ವ್ಯಾಪ್ತಿಯಲ್ಲಿ ಮಂಗಳವಾರ ವರದಿಯಾಗಿದೆ.

ಮನೆಯಲ್ಲಿದ್ದ ಉತ್ತರ ಪ್ರದೇಶ ಮೂಲದ ರಾಕೇಶ್, ಕೃಷ್ಣ, ಹರಿರಾಮ್, ರಾಮ್ ಧನ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಒಡೆದಿದೆ ಎಂದು ತಿಳಿದುಬಂದಿದೆ.

ನಗರದಲ್ಲಿ ವಾಸವಿದ್ದುಕೊಂಡು ಪಿಒಪಿ ಸೀಲಿಂಗ್ ಕೆಲಸ ಮಾಡುತ್ತಿದ್ದ ಯುವಕರು, ಅಡುಗೆ ಮಾಡಲು ಖಾಸಗಿ ಸಿಲಿಂಡರ್ ಬಳಕೆ ಮಾಡುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ತಿಂಡಿ ತಯಾರಿಸಲು ಗ್ಯಾಸ್ ಸ್ಟೌ ಹಚ್ಚಿದಾಗ ಸಿಲಿಂಡರ್ ಸ್ಫೋಟಗೊಂಡಿದೆ.

ಮನೆಯಲ್ಲಿದ್ದವರ ಪೈಕಿ ಓರ್ವ ಯುವಕ ಶೌಚಾಲಯದಲ್ಲಿದ್ದ ಕಾರಣ ಆತನಿಗೆ ಯಾವುದೇ ಗಾಯಗಳಾಗಿಲ್ಲ. ಇನ್ನುಳಿದ ಐವರು ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕೆ.ಎಸ್.ಲೇಔಟ್ ಠಾಣಾ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News