ಬೆಂಗಳೂರು | ಮರ ಬಿದ್ದು ಮಗು ಮೃತ್ಯು: ತನಿಖೆ
Update: 2025-03-23 23:41 IST

ಬೆಂಗಳೂರು: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷದ ಮಗು ಮೃತಪಟ್ಟಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪುಲಕೇಶಿನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ರಕ್ಷಾ ಎಂಬ ಮೂರು ವರ್ಷದ ಹೆಣ್ಣು ಸಾವನ್ನಪ್ಪಿದ್ದಾರೆ. ಶನಿವಾರ ಜೀವನಹಳ್ಳಿಯಲ್ಲಿ ರಕ್ಷಾ ತನ್ನ ತಂದೆ ಸತ್ಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಗಾಳಿ ಮಳೆಗೆ ರಸ್ತೆ ಬದಿ ಮರ ಬಿದ್ದಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಕೊನೆಯುಸಿರೆಳೆದಿದ್ದಾಳೆ.
ಘಟನೆ ಸಂಬಂಧ ಬಿಬಿಎಂಪಿ ಪೂರ್ವವಲಯದ ಜಂಟಿ ಆಯುಕ್ತೆ ಸರೋಜಾದೇವಿ, ಬಿಬಿಎಂಪಿ ಅರಣ್ಯ ಘಟಕದ ಮುಖ್ಯಸ್ಥ ಸ್ವಾಮಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಈ ಬಗ್ಗೆ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.