ಬೆಂಗಳೂರು: ನಾಲ್ವರು ಕರವೇ ಕಾರ್ಯಕರ್ತರ ಬಿಡುಗಡೆ

Update: 2023-12-31 14:38 GMT

ಬೆಂಗಳೂರು: ನಾಮಫಲಕ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ನಾಲ್ವರು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ರವಿವಾರ ಬಿಡುಗಡೆಗೊಳಿಸಲಾಗಿದೆ.

ಕರವೇ ಬೆಂಗಳೂರು ನಗರದ ಯುವ ಘಟಕದ ಅಧ್ಯಕ್ಷ ಕಾರ್ತಿಕ್‍ಗೌಡ, ಉಪಾಧ್ಯಕ್ಷ ಶರತ್, ಕಾರ್ಯಕರ್ತ ಹೇಮಂತ್‍ರಾಜ್ ಹಾಗೂ ಕರವೇ ಗೋವಿಂದರಾಜನಗರ ಕ್ಷೇತ್ರದ ಅಧ್ಯಕ್ಷ ಲೋಕೇಶ್‍ಗೌಡ ಎಂಬುವವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಇತ್ತೀಚೆಗೆ ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ಪ್ರತಿಭಟನಾ ರ್ಯಾಲಿ ನಡೆಸಿದ್ದರು. ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ.60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿದ್ದರು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಅಂಗಡಿಗಳ ಬೋರ್ಡ್‍ಗಳನ್ನು ಕಿತ್ತೆಸೆಯಲಾಗಿತ್ತು.

ಈ ವೇಳೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಜೊತೆ ಹೋರಾಟದಲ್ಲಿ ಪ್ರಮುಖ ಜವಾಬ್ದಾರಿ ಹೊತ್ತಿದ್ದ ಬೆಂಗಳೂರು ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಗೌಡ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಈ ಕುರಿತು ಕಬ್ಬನ್ ಪಾರ್ಕ್ ಹಾಗೂ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಿಸಲಾಗಿತ್ತು. ಇದೀಗ ಬಿಡುಗಡೆಗೊಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News