ಬೆಂಗಳೂರು: ಮನೆ-ಮನೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ

Bengaluru: Revision of voter list by house-to-house visits

Update: 2023-12-21 17:44 GMT

ಬೆಂಗಳೂರು: ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಿದರು.

ಗುರುವಾರ ನಗರದ ವಿವಿಧೆಡೆ ಭೇಟಿ ನೀಡಿದ ಅವರು, ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಮೂನೆ-6, 7 ಮತ್ತು 8 ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಇದೆ ಎಂದು ಮತದಾರರಿಗೆ ಮಾಹಿತಿ ನೀಡಿದರು.

ಇಲ್ಲಿನ ಶಾಂತಿನಗರದ ಹಾಗೂ ಶಿವಾಜಿನಗರರದ ವಿಧಾನಸಭಾ ಕ್ಷೇತ್ರದಲ್ಲಿ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾರ್ಗದರ್ಶನ ಒದಗಿಸಲು ಸೂಚಿಸಿದರು. ಹೆಬ್ಬಾಳ ವಿಧಾನಸಭಾ ಕ್ಷೆತ್ರದ ಸಂಜಯನಗರದ ಅಮರ ಜ್ಯೋತಿ ಲೇಔಟ್ ನಲ್ಲಿ ನಮೂನೆ 6ರ ಮೂಲಕ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್.ರಾಮಚಂದ್ರನ್, ಅಪರ ಜಿಲ್ಲಾ ಜಿಲ್ಲಾ ಚುನಾವಣಾಧಿಕಾರಿ (ಉತ್ತರ) ಸ್ನೇಹಲ್, ಸೇರಿದಂತೆ ಪ್ರಮುಖರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News