ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: ಜ.30ರವರೆಗೆ ನಾಮಪತ್ರ ಸಲ್ಲಿಕೆ ಅವಕಾಶ

Update: 2024-01-23 14:02 GMT

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಒಬ್ಬ ಸದಸ್ಯರನ್ನು ಚುನಾಯಿಸುವ ಸಂಬಂಧ ಫೆ.16 ರಂದು ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರಗಳನ್ನು ಅಭ್ಯರ್ಥಿಗಳು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಜ.30 ರೊಳಗೆ ಸಲ್ಲಿಸಬಹುದಾಗಿದೆ.

ನಾಮಪತ್ರದ ನಮೂನೆಗಳನ್ನು ಶಾಂತಿನಗರದ ಕೆ.ಎಚ್.ರಸ್ತೆಯಲ್ಲಿರುವ ಬಿಎಂಟಿಸಿ ಕಟ್ಟಡದ ಎರಡನೆ ಮಹಡಿಯಲ್ಲಿರುವ ಬೆಂಗಳೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ (ಸರಕಾರಿ ರಜಾ ದಿನದ ಹೊರತು) ಪಡೆದು ಸಲ್ಲಿಸಬಹುದು.

ಸಲ್ಲಿಸಲಾದ ನಾಮಪತ್ರಗಳ ಪರಿಶೀಲನೆಯನ್ನು ಜ.31ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆಸಲಾಗುವುದು. ನಾಮಪತ್ರ ಹಿಂಪಡೆಯಲು ಫೆ.2ರಂದು ಮಧ್ಯಾಹ್ನ 3 ಗಂಟೆಗೆ ಮುಂಚೆ ಅರ್ಜಿ ಸಲ್ಲಿಸಬಹುದು. ಫೆ.16 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಉಪ ಚುನಾವಣೆಯ ಮತದಾನ ನಡೆಯಲಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News