ಕೆಲಸದ ಸ್ಥಳ, ಕಚೇರಿಗಳಲ್ಲಿ ‘ಆಂತರಿಕ ದೂರು ಸಮಿತಿ’ ರಚನೆಗೆ ಸೂಚನೆ

Update: 2025-04-03 21:59 IST
ಕೆಲಸದ ಸ್ಥಳ, ಕಚೇರಿಗಳಲ್ಲಿ ‘ಆಂತರಿಕ ದೂರು ಸಮಿತಿ’ ರಚನೆಗೆ ಸೂಚನೆ
  • whatsapp icon

ಬೆಂಗಳೂರು : ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಕಾಯ್ದೆಯಡಿ ಯಾವುದೇ ಒಂದು ಕಚೇರಿ, ಸಂಸ್ಥೆ ಅಥವಾ ಕೆಲಸದ ಸ್ಥಳಗಳಲ್ಲಿ 10 ಮತ್ತು 10ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರೆ ಆ ಸಂಸ್ಥೆಯ ಮಾಲಕರು ಅಥವಾ ಕಚೇರಿಯ ಮುಖ್ಯಸ್ಥರು ‘ಆಂತರಿಕ ದೂರು ಸಮಿತಿ’ಯನ್ನು ರಚನೆ ಮಾಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.

ಈ ಬಗ್ಗೆ ಗುರುವಾರ ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಸಗಿ/ಸರಕಾರಿ ಕಚೇರಿ/ ಕೈಗಾರಿಕಾ ಸಂಸ್ಥೆ/ ಅಂಗಡಿ/ ಮಾಲ್ ಹಾಗೂ ಇತರೆ ಸಂಸ್ಥೆಗಳಲ್ಲಿ ಅಥವಾ ಕೆಲಸದ ಸ್ಥಳಗಳಲ್ಲಿ 10 ಮತ್ತು 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರೆ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಾಯ್ದೆಯಡಿ “ಆಂತರಿಕ ದೂರು ಸಮಿತಿ” ಯನ್ನು ರಚಿಸಿ https://shebox.wcd.gov.in/sign she box protal ಇಂಡೀಕರಿಸಬೇಕು ಎಂದು ಹೇಳಿದ್ದಾರೆ.

ತಮ್ಮ ಕಚೇರಿಗಳ ಆಂತರಿಕ ದೂರು ನಿವಾರಣಾ ಸಮಿತಿಯ ಮಾಹಿತಿಯನ್ನು ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9741614168/ 7899021646ಗೆ ಸಂಪರ್ಕಿಸಬಹುದು. ತಪ್ಪಿದ್ದಲ್ಲಿ ನಿಯಮಾನುಸಾರ ಸಂಬಂಧಿಸಿದ ಸಂಸ್ಥೆಯ ವಿರುದ್ಧ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News