ಮಳೆಯಿಂದ ವಿದ್ಯುತ್ ಸಮಸ್ಯೆ : ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, SMS ದೂರವಾಣಿ ಸಂಖ್ಯೆ ಪ್ರಕಟ

Update: 2024-05-07 15:17 GMT

ಬೆಂಗಳೂರು : ನಗರದಲ್ಲಿ ಮಳೆ ಸುರಿದ ಹಿನ್ನೆಯಲ್ಲಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, SMS ದೂರವಾಣಿ ಸಂಖ್ಯೆ ಪ್ರಕಟಿಸಲಾಗಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್ ಕಂಬಗಳು ಮುರಿದು, ವಿದ್ಯುತ್ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿಗೆ ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್ ಆಪ್ ಸಂಖ್ಯೆಗಳನ್ನು ನೀಡಲಾಗಿದೆ.

ವಾಟ್ಸ್‌ಆ್ಯಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್‍ಎಂಎಸ್‍ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್ ಸಂಖ್ಯೆಗಳನ್ನು ಒದಗಿಸಲಾಗಿದೆ.

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ-8277884020 ಹಾಗೂ ದಾವಣಗೆರೆ- 8277884021ಕ್ಕೆ ಗ್ರಾಹಕರು ಸಂಪರ್ಕಿಸಬಹುದಾಗಿದೆ. ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್ ಆಪ್ ಸಂಖ್ಯೆ - 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್ ಆಪ್ ಸಂಖ್ಯೆ- 9449844640ಗೆ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News