ಬಿಟ್ ಕಾಯಿನ್ ಹಗರಣ ಪ್ರಕರಣ | ಆರೋಪಿ ಶ್ರೀಕಿ ಸ್ನೇಹಿತೆಗೆ ಎಸ್‍ಐಟಿಯಿಂದ ನೋಟಿಸ್ ಜಾರಿ

Update: 2024-06-07 12:46 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಟ್ ಕಾಯಿನ್ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಶ್ರೀಕೃಷ್ಣ ಯಾನೆ ಶ್ರೀಕಿ ಸ್ನೇಹಿತೆ ಪೂಜಾ ಭಟ್ ಎಂಬುವರಿಗೆ ನೋಟಿಸ್ ಜಾರಿ ಮಾಡಿರುವ ಎಸ್‍ಐಟಿ ಅಧಿಕಾರಿಗಳು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

ಆರೋಪಿ ಶ್ರೀಕಿ, ಬಿಟ್ ಕಾಯಿನ್ ಅಕ್ರಮದಲ್ಲಿ ಗಳಿಸಿದ ಹಣದಲ್ಲಿ ಪೂಜಾ ಭಟ್ ಗೆ ಕಾರು ಹಾಗೂ ಮನೆ ಖರೀದಿಸಿರುವ ಆರೋಪವಿರುವುದರಿಂದ ಪೂಜಾ ಭಟ್ ವಿಚಾರಣೆ ನಡೆಸಲು ನಿರ್ಧರಿಸಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತುರ್ತಾಗಿ ವಿಚಾರಣೆಗೆ ಬರುವಂತೆ ಅವರಿಗೆ ನೋಟಿಸ್‍ನಲ್ಲಿ ಸೂಚಿಸಲಾಗಿದೆ. ಸದ್ಯ ರಾಜಸ್ಥಾನದಲ್ಲಿರುವ ಪೂಜಾ ಭಟ್ ಶ್ರೀಕಿಯಿಂದ ಹಣ, ಕಾರು ಹಾಗೂ ಮನೆ ಪಡೆದುಕೊಂಡಿರುವ ಮಾಹಿತಿಯಿದ್ದು, ವಿಚಾರಣೆ ಬಳಿಕ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾರ್ಜ್‍ಶೀಟ್ ಸಲ್ಲಿಕೆ: 2020ರಲ್ಲಿ ಕೆಂಪೇಗೌಡನಗರದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಿತ್ತು. ಪ್ರತ್ಯೇಕವಾಗಿ ಪ್ರಕರಣ ವರ್ಗಾಯಿಸಿಕೊಂಡು ಸಿಸಿಬಿ ತನಿಖೆ ನಡೆಸಿತ್ತು. ಕಳೆದ ವರ್ಷ ಎಸ್‍ಐಟಿ ರಚನೆಯಾಗುತ್ತಿದ್ದಂತೆ ಕೆಂಪೇಗೌಡನಗರ ನಗರದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸಿ ಒಂದನೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಶ್ರೀಕಿ, ಬಿಟ್ ಕಾಯಿನ್ ಮಾರಾಟಗಾರ ರಾಬಿನ್ ಖಂಡೇವಾಲಾ, ಸುಜಯ್ ಸೇರಿದಂತೆ ಆರು ಮಂದಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News