ನನ್ನ ಮೌನವನ್ನು ದೌರ್ಬಲ್ಯವೆಂದು ಪರಿಗಣಿಸಿದರೆ ಅದು ತಪ್ಪು: ಬಂಡಾಯ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಚ್ಚರಿಕೆ

Update: 2024-12-01 07:36 GMT

ಬಿ.ವೈ.ವಿಜಯೇಂದ್ರ

ಬೆಂಗಳೂರು : ಮೂರು ಕ್ಷೇತ್ರಗಳ ಉಪಚುನಾವಣೆ ಸೋಲಿನ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ತಾರಕಕ್ಕೇರಿದ್ದು, ಶಾಸಕ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಂಬಲಿಗರ ನಡುವೆ ವಾಗ್ಯುದ್ಧ ನಡೆಯುತ್ತಿದೆ. ಈ ನಡುವೆ ಬಂಡಾಯ ಬಿಜೆಪಿ ನಾಯಕರಿಗೆ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನನ್ನ ಮೌನವನ್ನು ದೌರ್ಬಲ್ಯವೆಂದು ಪರಿಗಣಿಸಬೇಡಿ. ಅದು ತಪ್ಪು. ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿದವರಿಗೆ ನಿರಾಶೆಯಾಗಲಿದೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದಾರೆ, ಇವರೆಲ್ಲರಿಗೂ ಮುಂದಿನ ದಿನಗಳಲ್ಲಿ ಇದಕ್ಕೆಲ್ಲಾ ಉತ್ತರ ನೀಡುತ್ತೇವೆ ಎಂದು ತಿಳಿಸಿದರು.

ದಿಲ್ಲಿಗೆ ತೆರಳಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ದೂರು ಕೊಡುವುದಿಲ್ಲ. ಪಕ್ಷದ ವರಿಷ್ಠರೇ ಎಲ್ಲಾ ಬೆಳವಣಿಗೆಯನ್ನು ಗಮನಿಸುತ್ತಿದ್ದು, ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ದಿಲ್ಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದೇನೆ. ರಾಜ್ಯದ ಮೂರು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುಣಾವಣೆಯ ಫಲಿತಾಂಶ ಹಾಗೂ ರಾಜ್ಯದಲ್ಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಅವರ ಗಮನಕ್ಕೆ ತಂದಿದ್ದೇನೆ. ಕೆಲವರು ಅವರ ನಡವಳಿಕೆಯಿಂದ ಎತ್ತರಕ್ಕೆ ಬೆಳೆಯುವ ಭ್ರಮೆಯಲ್ಲಿದ್ದರೆ, ಅದು ಖಂಡಿತ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಂದಾಣಿಕೆ ರಾಜಕಾರಣದ ವಿಡಿಯೋ, ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ರಿಗೆ ಮನವಿ ಮಾಡುವೆ ಎಂದು ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News