ಬಿಎಂಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು

Update: 2024-09-30 15:10 GMT

ಬೆಂಗಳೂರು : ಬಿಎಂಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ನಗರದ ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಟಾಟಾ ಇನ್ಸ್‌ಸ್ಟಿಟ್ಯೂಟ್ ಮುಂಭಾಗ ಸೋಮವಾರ ವರದಿಯಾಗಿದೆ.

ಈಶ್ವರ್(43) ಎಂಬಾತ ಮೃತಪಟ್ಟ ದ್ವಿಚಕ್ರ ವಾಹನ ಸವಾರ ಎಂದು ಗುರುತಿಸಲಾಗಿದೆ. ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಲಹಂಕದಿಂದ ಯಶವಂತಪುರಕ್ಕೆ ಬಿಎಂಟಿಸಿ ಬಸ್ ತೆರಳುತ್ತಿದ್ದು, ಈ ವೇಳೆ ಟಾಟಾ ಇನ್ಸ್‌ಸ್ಟಿಟ್ಯೂಟ್ ಮುಂಭಾಗದಲ್ಲಿ ದ್ವಿಚಕ್ರ ವಾಹನ ಚಲಿಸುತ್ತಿದ್ದ ಈಶ್ವರ್ ಎಂಬುವರು ಪಕ್ಕದಲ್ಲಿದ್ದ ಕಾರೊಂದಕ್ಕೆ ತಾಗಿಸಿ ಕೆಳಗೆ ಬಿದ್ದಿದ್ದು, ಅವರ ತಲೆ ಮೇಲೆ ಬಸ್‍ನ ಹಿಂಬದಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮೃತ ಈಶ್ವರ್‌ನ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News