ಬಿಎಂಟಿಸಿಯಲ್ಲಿ ಟಿಕೆಟ್ ರಹಿತ ಪ್ರಯಾಣ: 3350 ಪ್ರಯಾಣಿಕರಿಗೆ ದಂಡ; ವಸೂಲಾದ ಮೊತ್ತ ಎಷ್ಟು ಗೊತ್ತಾ?

Update: 2023-11-13 14:19 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಟಿಕೆಟನ್ನು ಪಡೆಯದೇ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಮಹಿಳೆಯ ಆಸನದಲ್ಲಿ ಕುಳಿತು ಪ್ರಯಾಣಿಸುವ ಪುರುಷರನ್ನು ಪತ್ತೆ ಹಚ್ಚಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 6,99,325 ರೂ.ಗಳನ್ನು ವಸೂಲಿ ಮಾಡಲಾಗಿದೆ.

ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 15,165 ಟ್ರಿಪ್‍ಗಳನ್ನು ತಪಾಸಣೆ ನಡೆಸಿವೆ. 3350 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ 6,72,125 ರೂ.ದಂಡ ವಸೂಲಿ ಮಾಡಿ, ಸಂಸ್ಥೆಯ ನಿರ್ವಾಹಕರ ವಿರುದ್ಧ 953 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 272 ಪುರುಷ ಪ್ರಯಾಣಿಕರಿಂದ ಒಟ್ಟು 27,200 ರೂ.ದಂಡ ವಿಧಿಸಲಾಗಿರುತ್ತದೆ. ಪ್ರಯಾಣಿಕರು ಬಿಎಂಟಿಸಿ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು.

ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News