ಪೋಕ್ಸೋ ಪ್ರಕರಣ ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಅರ್ಜಿ; ಜ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ತಮ್ಮ ವಿರುದ್ಧದ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಬಿಜೆಪಿ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಜ.10ಕ್ಕೆ ಮುಂದೂಡಿದೆ.
ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿ, ಅಧೀನ ನ್ಯಾಯಾಲಯ ಪ್ರಕರಣದಲ್ಲಿ ಸಂಜ್ಞೇ ಸ್ವೀಕರಿಸಿ ಆದೇಶದಲ್ಲಿ ವಿವೇಚನೆ ಬಳಸಲಾಗಿಲ್ಲ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅಭಿಪ್ರಾಯಪಟ್ಟಿರು.
ವಿಚಾರಣೆ ವೇಳೆ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಸಂತ್ರಸ್ತೆಯ ಹೇಳಿಕೆಯನ್ನಷ್ಟೇ ಪರಿಗಣಿಸಿದರೆ ತನಿಖೆಯ ಅಗತ್ಯ ಇಲ್ಲ. ಕೆಲವು ಸೆಕ್ಷನ್‌ಗಳು ಅನ್ವಯಿಸಿರುವುದಕ್ಕೆ ವ್ಯಾಪ್ತಿಯೇ ಇಲ್ಲ. ಸಾಕ್ಷಿಗಳ ಹೇಳಿಕೆ ಪರಿಗಣಿಸಬೇಕು ಎಂದಾದರೆ, ಸಂತ್ರಸ್ತೆಯ ಹೇಳಿಕೆ ಪರಿಗಣಿಸಬೇಕಿದೆ ಎಂದರು. ಬಿಎಸ್‌ವೈ ತನ್ನನ್ನ ಕೊಠಡಿಗೆ ಕರೆದುಕೊಂಡು ಹೋದರು ಎಂದು ಸಂತ್ರಸ್ತೆ ಆರೋಪಿಸಿದ್ದರು ಎಂದು ನ್ಯಾಯಪೀಠ ಹೇಳಿದಾಗ, ತನಿಖೆ ನಡೆಸಿರುವ ಪೊಲೀಸರು ಕೆಲ ಸಾಕ್ಷಿಗಳ ಹೇಳಿಕೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಆರೋಪಿಸಿದರು
ಬಿಎಸ್‌ವೈ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಸತ್ಯಾಸತ್ಯತೆ ಬಯಲು ಮಾಡಲು ತನಿಖೆ ನಡೆಸಲಾಗುತ್ತಿದೆ. ತನಿಖೆ ಪಕ್ಷಪಾತಿಯಾಗಿದ್ದು, ನ್ಯಾಯಯುತ ಮತ್ತು ಕಾನೂನು ಅನ್ವಯವಾಗಬೇಕು. ಸಂಜ್ಞೇ ಪರಿಗಣಿಸುವ ಸಂದರ್ಭದಲ್ಲಿ ವಿಚಾರಣಾಧೀನ ನ್ಯಾಯಾಲಯವು ತನಿಖಾಧಿಕಾರಿಯ ಅಭಿಪ್ರಾಯ ಒಪ್ಪಲು ಸಾಧ್ಯವಿಲ್ಲ. ಇದು ಪೊಲೀಸರು ಸಲ್ಲಿಸಿರುವ ಬಿ ವರದಿಗೂ ಅನ್ವಯ ಆಗುತ್ತದೆ. ತನಿಖಾಧಿಕಾರಿ ಸಾಕ್ಷಿ ಸಂಗ್ರಹಿಸಬಹುದು, ಅವರು ಸಾಕ್ಷಿಯನ್ನು ಪ್ರತ್ಯೇಕಿಸಲಾಗದು. ಸಾಕ್ಷಿಯು ಒಪ್ಪಿತವೇ ಇಲ್ಲವೇ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ. ದೂರು ದಾಖಲಿಸುವುದಕ್ಕೂ ಮುನ್ನ ದೂರುದಾರೆ ಮತ್ತು ಸಂತ್ರಸ್ತೆಯು ಹಲವು ಬಾರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು. ವಾದ ಆಲಿಸಿದ ಹೈಕೋರ್ಟ್ ವಿಚಾರಣೆ ಮುಂದೂಡಿದರು.