ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುತ್ತಿರುವ ರಾಜ್ಯ ಸರಕಾರ : ಬಿ.ವೈ.ವಿಜಯೇಂದ್ರ

Update: 2025-02-18 21:08 IST
ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುತ್ತಿರುವ ರಾಜ್ಯ ಸರಕಾರ : ಬಿ.ವೈ.ವಿಜಯೇಂದ್ರ
  • whatsapp icon

ಬೆಂಗಳೂರು : ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ರಾಜ್ಯ ಸರಕಾರ ಚೆಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದವರು ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ರಾಜ್ಯ ಸರಕಾರವು ಅತಿಥಿ ಶಿಕ್ಷಕರ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕಿತ್ತು. ಈ ಹಿಂದೆ 5 ಸಾವಿರ ರೂ. ಇದ್ದ ಗೌರವಧನವನ್ನು 2,500 ರೂ. ಹೆಚ್ಚಿಸಿ 7500 ರೂ. ಕೊಡುವ ಕೆಲಸವನ್ನು ಬಿಜೆಪಿ ಸರಕಾರ ಮಾಡಿತ್ತು. ಬಳಿಕ ಅದನ್ನು 10 ಸಾವಿರ ರೂ.ಗಳಿಗೆ ಬಿಜೆಪಿ ಸರಕಾರ ಏರಿಸಿತ್ತು ಎಂದು ವಿಜಯೇಂದ್ರ ತಿಳಿಸಿದರು.

ಅತಿಥಿ ಶಿಕ್ಷಕರು ನಾಡಿನ ಭವಿಷ್ಯ ರೂಪಿಸುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅವರ ಕನಿಷ್ಠ ಬೇಡಿಕೆಗಳಿಗಾದರೂ ಸ್ಪಂದಿಸುವುದು ಸರಕಾರದ ಕರ್ತವ್ಯ. ಗರ್ಭಿಣಿ ಮಹಿಳಾ ಶಿಕ್ಷಕಿಗೆ ಗೌರವ ಸಂಪಾದನೆ ಸಹಿತ ರಜೆ ಕೊಡಬೇಕು ಎಂಬುದೂ ಸೇರಿ ಕನಿಷ್ಠ ಬೇಡಿಕೆಗಳಿಗಾಗಿ ಒತ್ತಾಯ ಮಾಡುತ್ತಿದ್ದಾರೆ. ರಜೆ ಕೊಡದೆ ಇದ್ದಲ್ಲಿ ಗರ್ಭಿಣಿ ಶಿಕ್ಷಕಿ ಕೆಲಸ ಮಾಡುವುದು ಹೇಗೆ ಎಂದು ಅವರು ಪ್ರಶ್ನಿಸಿದರು.

ವಿಶ್ವವಿದ್ಯಾಲಯಗಳಿಗೆ 300 ಕೋಟಿಯಿಂದ 400 ಕೋಟಿ ರೂ. ಅನುದಾನ ನೀಡಬೇಕಿದೆ. ಆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕಾಗಿ ಹಿಂದಿನ ಸರಕಾರದ ಮೇಲೆ ಗೂಬೆ ಕೂರಿಸಿ ಆ ವಿಶ್ವವಿದ್ಯಾಲಯಗಳನ್ನು ಮುಚ್ಚಿಸಲು ಕಾಂಗ್ರೆಸ್ ಸರಕಾರ ಮುಂದಾಗಿದೆ ಎಂದು ವಿಜಯೇಂದ್ರ ಟೀಕಿಸಿದರು.

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅತಿಥಿ ಉಪನ್ಯಾಸಕರು ಸರಕಾರದ ಮುಂದಿಟ್ಟಿರುವ ಬೇಡಿಎಕಗಳಿಗೆ ನಮ್ಮ ಸಹಮತವಿದೆ. ಈ ಸಂಬಮಧ ಮುಖ್ಯಮಂತ್ರಿ, ಶಿಕ್ಷಣ ಸಚಿವ ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುತ್ತೇನೆ. ಸದನದಲ್ಲೂ ಪ್ರಸ್ತಾಪಿಸಿ ಹೋರಾಟ ಮಾಡುವುದಾಗಿ ತಿಳಿಸಿದರು.

ಡಾಟಾ ಎಂಟ್ರಿ ಆಪರೇಟರ್‍ಗಳಿಗೆ 7-8 ತಿಂಗಳಿನಿಂದ ವೇತನ ಸಿಕ್ಕಿಲ್ಲ. ಅವರು ನನ್ನ ಕಚೇರಿಗೆ ಬಂದಿದ್ದರು ಎಂದ ಅವರು, ಸರಕಾರದಲ್ಲಿ ದೊಡ್ಡ ತಿಮಿಂಗಿಲಗಳು ಸೇರಿಕೊಂಡಿವೆ. ಎಲ್ಲಿ ಸೋರಿಕೆ ಆಗುತ್ತಿದೆಯೋ ಗೊತ್ತಿಲ್ಲ ಎಂದು ದೂರಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News