ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಆರ್. ಅಶೋಕ್

Update: 2025-04-11 14:43 IST
Photo of R. Ashok

ಆರ್‌.ಅಶೋಕ್‌

  • whatsapp icon

ಬೆಂಗಳೂರು: ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ. ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು ಜಾತಿಜಾತಿಗಳ ನಡುವೆ ವಿಷಬೀಜ ಬಿತ್ತಲು ಈ ವರದಿ ರೂಪಿಸಲಾಗಿದೆ. ಕಾಂಗ್ರೆಸ್ಗೆ ಇದೇ ಬೇಕಾಗಿದೆ ಎಂದರು.

ಗುತ್ತಿಗೆದಾರರು ಕಮಿಶನ್ ಆರೋಪ ಮಾಡಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಸಭೆ ಮಾಡಿ ಚರ್ಚಿಸಲಿ. ಯಾವ ಖಾತೆಗಳಲ್ಲಿ ಎಷ್ಟು ಲೂಟಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಮಿಶನ್ ಕೊಡುವವರಿಗೆ ಬಿಲ್ ಪಾವತಿಯಾಗುತ್ತದೆ. ಅಬಕಾರಿ ಇಲಾಖೆಯಲ್ಲಿ ಸಚಿವರ ಮಗ ಲೂಟಿ ಮಾಡುತ್ತಿದ್ದಾರೆ. ಸಚಿವರ ಮೇಲೆ ಇಷ್ಟೆಲ್ಲ ಆರೋಪ ಬಂದರೂ ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಾರೆ. ಭ್ರಷ್ಟಾಚಾರವೇ ನಮ್ಮ ಬಂಧು ಬಳಗ ಎಂದು ಕಾಂಗ್ರೆಸ್ ಘೋಷಣೆ ಮಾಡಿಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದೇ ಇರಲು ಕಮಿಶನ್ ವಸೂಲಿ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಸಿಎಂ ಆಗಲು ಕಮಿಶನ್ ಸಂಗ್ರಹಿಸುತ್ತಿದ್ದಾರೆ. ಸಚಿವರು ಕೂಡ ಸಿಎಂ ಆಗಲು ಕಮಿಶನ್ ಮಾಡುತ್ತಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಗಳು ಕಲೆಕ್ಷನ್ ಸೆಂಟರ್ ಆಗಿದೆ. ಜೊತೆಗೆ ಜನರ ಮೇಲೆ 80 ಸಾವಿರ ಕೋಟಿ ರೂ. ತೆರಿಗೆ ಹಾಕಿದ್ದಾರೆ ಎಂದು ದೂರಿದರು.

ಸರಕಾರದ ವಿರುದ್ಧದ ಜೆಡಿಎಸ್ನ ಹೋರಾಟಕ್ಕೆ ಬಿಜೆಪಿಯ ಸಂಪೂರ್ಣ ಬೆಂಬಲವಿದೆ. ಯಾವ ಹೋರಾಟ ಒಟ್ಟಿಗೆ ಮಾಡಬೇಕು, ಪ್ರತ್ಯೇಕ ಮಾಡಬೇಕೆಂದು ಎಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸಲಾಗುವುದು. ನಮ್ಮ ಅವರ ನಡುವಿನ ಬಾಂಧವ್ಯಕ್ಕೆ ಯಾರೂ ಹುಳಿ ಹಿಂಡಲು ಸಾಧ್ಯವೇ ಇಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News