ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ : ಸಿಸಿಬಿ ತನಿಖೆ ಆರಂಭ
Update: 2025-04-24 22:05 IST
ಓಂ ಪ್ರಕಾಶ್
ಬೆಂಗಳೂರು : ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಆರಂಭಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಚುರುಗೊಳಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣದ ದಾಖಲೆಗಳನ್ನು ಎಚ್‍ಎಸ್‍ಆರ್ ಲೇಔಟ್ ಠಾಣೆಯ ಪೊಲೀಸರು ಸಿಸಿಬಿಗೆ ಹಸ್ತಾಂತರಿಸಿದ್ದು, ಸಿಸಿಬಿಯ ಎಸಿಪಿ ಧಮೇಂದ್ರ ಅವರ ತಂಡ ತನಿಖೆ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಓಂ ಪ್ರಕಾಶ್ ಅವರ ಮಗಳು ಕೃತಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಲಿದ್ದಾರೆ. ಅಲ್ಲದೆ, ನ್ಯಾಯಾಂಗ ಬಂಧನದಲ್ಲಿರುವ ಓಂ ಪ್ರಕಾಶ್ ಅವರ ಪತ್ನಿಯನ್ನು ಸಿಸಿಬಿ ತಂಡ ಸದ್ಯದಲ್ಲೇ ತನಿಖೆಗೆ ಒಳಪಡಿಸಲಿದೆ ಎಂದು ತಿಳಿದುಬಂದಿದೆ.