ಸಿಇಟಿ: ಅರ್ಜಿ ಸಲ್ಲಿಕೆಗೆ 15ರವರೆಗೆ ಅವಕಾಶ
ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೊನೆಯದಾಗಿ ಮತ್ತೊಂದು ಅವಕಾಶ ನೀಡಿದೆ.
ಇದೇ 12ರಿಂದ 15ರವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಮಾ.16ರ ಸಂಜೆ 5.30ರವರೆಗೆ ಸಮಯ ಇರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಮೇರೆಗೆ ಮತ್ತೊಂದು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸದಿರುವವರು ಹಾಗೂ ಅರ್ಜಿಗಳನ್ನು ಪೂರ್ಣಗೊಳಿಸದಿರುವವರು ಈ ಅವಕಾಶವನ್ನು ಪಡೆದುಕೊಳ್ಳಬಹುದು. ಆದರೆ ಯಾವುದೇ ಕಾರಣಕ್ಕೂ ಪುನಃ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೂ ಇದೇ ಅನ್ವಯವಾಗುತ್ತಿದ್ದು, ಅವರು ಕೂಡ ಈಗಲೇ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬೇಕು ಎಂದು ಅವರು ವಿವರಿಸಿದ್ದಾರೆ.
ವಿಳಂಬ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಸಂಬಂಧ ಅರ್ಜಿ ನಮೂನೆ ಬಿಡುವುದು ತಡವಾಗಿದೆ. ಹೀಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ವಿಳಂಬವಾಗಲಿದೆ ಎಂದು ಅವರು ತಿಳಿಸಿದ್ದಾರೆ.