ಛಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕನ ಸ್ಥಾನ ತ್ಯಜಿಸುವುದು ಸೂಕ್ತ : ರಮೇಶ್‍ ಬಾಬು

Update: 2024-10-10 20:49 IST
ಛಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕನ ಸ್ಥಾನ ತ್ಯಜಿಸುವುದು ಸೂಕ್ತ : ರಮೇಶ್‍ ಬಾಬು

ಛಲವಾದಿ ನಾರಾಯಣಸ್ವಾಮಿ/ರಮೇಶ್‌ ಬಾಬು

  • whatsapp icon

ಬೆಂಗಳೂರು : ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿನಿತ್ಯ ಮನಸೋ ಇಚ್ಛೆ ಸುದ್ದಿಗೋಷ್ಟಿ ನಡೆಸುವ ಮೂಲಕ ಸದನದ ಪರಂಪರೆ ಮತ್ತು ಸಂಸ್ಕೃತಿಗೆ ಕಳಂಕ ಬರುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರು ಆ ಸ್ಥಾನವನ್ನು ತ್ಯಜಿಸುವುದು ಒಳ್ಳೆಯದು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‍ ಬಾಬು ತಿಳಿಸಿದ್ದಾರೆ.

ಗುರುವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಸಿಎಂ ಸಿದ್ದರಾಮಯ್ಯರ ಮೇಲೆ ಹತಾಶೆಯ ಆರೋಪಗಳ ಮಾಡಿ, ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಂಡಿದ್ದು, ಬಿ.ಎಲ್.ಸಂತೋಷ ಕೃಪಾಕಟಾಕ್ಷ ಹಿರಿಯರನ್ನು ಬದಿಗೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣವನ್ನು ಪ್ರಸ್ತಾಪಿಸಿರುವ ನಾರಾಯಣಸ್ವಾಮಿ, ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಬಿಜೆಪಿ ನಾಯಕರ ಮೇಲೆ ಈಡಿ ಪ್ರಕರಣಗಳು ದಾಖಲಾಗಿದ್ದರೂ, ಅದರ ಬಗ್ಗೆ ಚಕಾರ ಎತ್ತದ ಚಲವಾದಿ ನಾರಾಯಣಸ್ವಾಮಿ ಯಾವ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿದ್ದಾರೆ ಎನ್ನುವುದು ಜನಕ್ಕೆ ತಿಳಿಯುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ನಾರಾಯಣಸ್ವಾಮಿಗೆ ಹೊಸಕೋಟೆ ಸಿಎ ನಿವೇಶನದ ಬಿರಿಯಾನಿ ಹೋಟೆಲ್ ಹಗರಣ ಕುರಿತು ಸ್ಪಷ್ಟಕಾರಣ ನೀಡಿಲ್ಲ. ವಿಪಕ್ಷ ನಾಯಕ ಸ್ಥಾನವನ್ನು ಕಲ್ಪಿಸಿ, ಇದುವರಿಗೆ ಅವರ ಮೇಲೆ ಬಂದಿರುವ ಆರೋಪಗಳಿಗೆ ಉತ್ತರ ನೀಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ಆದರೆ, ನಾರಾಯಣಸ್ವಾಮಿ ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುವ ಬದಲು ತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ತನಿಖೆಗೆ ಸಹಕರಿಸಿ ಅವರ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರಾದರ್ಶಕ ತನಿಖೆಗೆ ಅವಕಾಶ ಕಲ್ಪಿಸಲಿ ಎಂದು ರಮೇಶ್‍ ಬಾಬು ಸವಾಲು ಹಾಕಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News