ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿಯಲ್ಲಿ ಮಾರ್ಪಾಡು
ಬೆಂಗಳೂರು: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಫೆ.26ರಿಂದ ಮಾ.2ರ ವರೆಗೆ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಕಾರಣಕ್ಕಾಗಿ ಮಾರ್ಪಾಟು ಮಾಡಲಾಗಿದೆ.
ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆಗಳು, ಗಣಿತ ಹಾಗೂ ಸಮಾಜ ವಿಜ್ಞಾನ ವಿಷಯಗಳನ್ನು ಬೆಳಗಿನ ಅವಧಿಯಲ್ಲಿ ಎಂದಿನಂತೆ ನಡೆಯಲಿದೆ. ಆದರೆ ಮಾ.1ರಂದು ದ್ವಿತೀಯ ಪಿಯುಸಿ ಪರೀಕ್ಷೆ ಇರುವುದರಿಂದ, ಪರೀಕ್ಷೆಗೆ ಕೆಲವು ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪರೀಕ್ಷಾ ಕೇಂದ್ರಗಳಾಗಿ ರಚಿಸಲಾಗಿರುತ್ತದೆ.
ಹೀಗಾಗಿ ಶಾಲಾ/ಕಾಲೇಜುಗಳಲ್ಲಿಯೇ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಬೇಕಾಗಿರುತ್ತದೆ. ಇದರಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತೊಂದರೆ ಉಂಟಾಗುವುದನ್ನು ಮಂಡಲಿ ಮನಗಂಡು ಅಂದು ನಡೆಯುವ ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ನಿಗದಿಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.