ವಂಚನೆ ಪ್ರಕರಣ : ಐಶ್ವರ್ಯಗೌಡ ವಿರುದ್ಧ ಮತ್ತೊಂದು ಎಫ್‍ಐಆರ್

Update: 2025-01-07 17:44 GMT

ಐಶ್ವರ್ಯ ಗೌಡ

ಬೆಂಗಳೂರು : ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ವಂಚಿಸುತ್ತಿದ್ದ ಐಶ್ವರ್ಯ ಗೌಡ ವಿರುದ್ಧ ಇಲ್ಲಿನ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‍ಐಆರ್ ದಾಖಲಾಗಿದೆ.

ಹಣ ಮತ್ತು ಚಿನ್ನಾಭರಣಗಳು ಸೇರಿದಂತೆ 5.03 ಕೋಟಿ ರೂ. ವಂಚಿಸಿರುವುದಾಗಿ ಡಾ.ಮಂಜುಳಾ ಪಾಟೀಲ್ ಎಂಬವರು ಆರ್.ಆರ್.ನಗರ ಠಾಣೆಗೆ ದೂರು ನೀಡಿದ್ದು, ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಕೆ.ಎನ್, ಕಾರು ಚಾಲಕ ಧನಂಜಯ್ ಹಾಗೂ ಅಶ್ವಥ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸ್ತ್ರೀರೋಗ ತಜ್ಞೆಯಾಗಿರುವ ಮಂಜುಳಾ ಪಾಟೀಲ್ ಅವರಿಗೆ 2020-21ನೆ ಸಾಲಿನಲ್ಲಿ ಚಿಕಿತ್ಸೆಗಾಗಿ ಬರುತ್ತಿದ್ದಾಗ ಐಶ್ವರ್ಯಾ ಗೌಡ ಪರಿಚಯವಾಗಿತ್ತು. ತಾನು, ಡಿ.ಕೆ.ಸುರೇಶ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರಿ ಎಂದು ಪರಿಚಯಿಸಿಕೊಂಡಿದ್ದ ಐಶ್ವರ್ಯಾ ಗೌಡ, ತನಗೆ ದೊಡ್ಡಮಟ್ಟದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಇರುವುದಾಗಿ ನಂಬಿಸಿದ್ದಳು.

2022ರಿಂದ 2024ರವೆಗೂ ಹೂಡಿಕೆ, ಮತ್ತಿತರ ಕಾರಣಗಳನ್ನು ನೀಡಿ ಹಂತಹಂತವಾಗಿ 2.52 ಕೋಟಿ ರೂ. ಹಣ ಹಾಗೂ 2.50 ಕೋಟಿ ರೂ. ಮೌಲ್ಯದ ಒಟ್ಟು 2 ಕೆ.ಜಿ 350 ಗ್ರಾಂ ಚಿನ್ನಾಭರಣ ಪಡೆದು ವಂಚನೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News