ರಾಜ್ಯದಲ್ಲಿ ಪರ್ಯಾಯ ಪಕ್ಷವೊಂದನ್ನು ಸ್ಥಾಪಿಸುವ ಚಿಂತನೆ ಇದೆ : ಸಿಎಂ ಇಬ್ರಾಹೀಂ
ಬೆಂಗಳೂರು : ರಾಜ್ಯದ ಜನರ ಕಲ್ಯಾಣಕ್ಕಾಗಿ ಪರ್ಯಾಯ ರಾಜಕೀಯ ಪಕ್ಷವೊಂದು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಮಂಗಳವಾರ ನಗರದ ಬೆನ್ಸನ್ ಟೌನ್‍ನಲ್ಲಿರುವ ತಮ್ಮ ನಿವಾಸದಲ್ಲಿ ಪರ್ಯಾಯ ರಾಜಕೀಯ ಪಕ್ಷ ಸ್ಥಾಪಿಸುವ ಕುರಿತು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಡಾ.ಎಂ.ಪಿ.ನಾಗೇಗೌಡ, ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ನಾಗೇಶ್ ಸೇರಿದಂತೆ ಪ್ರಮುಖ ಮುಖಂಡರೊಂದಿಗೆ ಅವರು ಚರ್ಚೆ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ಜನರಿಗೆ ನ್ಯಾಯ ದೊರೆಯುತ್ತಿಲ್ಲ. ಎಲ್ಲವೂ ನಾಟಕೀಯ ರೂಪದ ಭಾಗವಾಗಿ ನಡೆದುಕೊಳ್ಳುತ್ತಿವೆ. ಹಾಗಾಗಿ ರಾಜ್ಯಕ್ಕೆ ಒಂದು ಹೊಸ ಪರ್ಯಾಯ ಪಕ್ಷ ಸ್ಥಾಪಿಸಬೇಕು ಎಂದು ನುಡಿದರು.
ನಾಗೇಶ್ ಮಾತನಾಡಿ, ರಾಜ್ಯದಲ್ಲಿ ಪರ್ಯಾಯ ರಾಜಕೀಯ ಪಕ್ಷ ಅಗತ್ಯವಿದೆ ಎನ್ನುವ ಕೂಗು ಮೊದಲಿನಿಂದಲೂ ಇದೆ. ಅದರ ಪರಿಣಾಮವಾಗಿ ಇಂದು ಸಭೆಯನ್ನು ಕರೆಯಲಾಗಿತ್ತು. ಇಂತಹ ನಿರ್ಧಾರಕ್ಕೆ ಹಲವು ಹಿರಿಯ ನಾಯಕರು ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದರು.