ಪ್ರಧಾನಿ ಮೋದಿಯವರು ಸುಳ್ಳು ಹೇಳುವುದು ಹೊಸ ವಿಷಯವೇನಲ್ಲ : ಸಿಎಂ ಸಿದ್ದರಾಮಯ್ಯ

Update: 2024-11-10 14:38 GMT

ಸಿದ್ದರಾಮಯ್ಯ

ಹುಬ್ಬಳ್ಳಿ : ‘ಪ್ರಧಾನಿ ಮೋದಿಯವರು ಸುಳ್ಳು ಹೇಳುವುದು ಹೊಸ ವಿಷಯವೇನಲ್ಲ. ಆದರೆ, ರಾಜ್ಯ ಸರಕಾರದ ವಿರುದ್ಧ ಈ ಮಟ್ಟದ ಸುಳ್ಳು ಹೇಳಿದ್ದು ಪ್ರಧಾನಿ ಸ್ಥಾನಕ್ಕೆ ದೊಡ್ಡ ಅವಮಾನ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ರವಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕರ್ನಾಟಕ ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಭ್ರಷ್ಟಾಚಾರ ಆಗಿದೆ’ ಎಂದು ಮೋದಿ ಹೇಳಿದ್ದಾರೆ. ಅಷ್ಟೊಂದು ದೊಡ್ಡ ಮೊತ್ತದ ಹಣ ಇಲಾಖೆಯಲ್ಲಿ ಎಲ್ಲಿರುತ್ತದೆ, ಯಾರು ಕೊಡುತ್ತಾರೆ? ಪ್ರಧಾನಿ ಸ್ಥಾನದಲ್ಲಿರುವವರಿಗೆ ಈ ಮಟ್ಟದ ತಿಳಿವಳಿಕೆ ಕೊರತೆ ಇರಬಾರದು’ ಎಂದು ಆಕ್ಷೇಪಿಸಿದರು.

'ಗೊಡ್ಡು ಬೆದರಿಕೆಗೆ ಹೆದರಲ್ಲ' ಎನ್ನುವ ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೊರೋನ ಹಗರಣಕ್ಕೆ ಸಂಬಂಧಿಸಿದ ನ್ಯಾಯಮೂರ್ತಿ ಕುನ್ಹಾ ಅವರ ವರದಿ ಸಂಪುಟದ ಮುಂದೆ ಬಂದಾಗ ಚರ್ಚಿಸಿ ತೀರ್ಮಾನ ಮಾಡಲಾಗುವುದು. ತನಿಖಾ ಆಯೋಗದ ವರದಿ ಹೇಗೆ ಗೊಡ್ಡು ಬೆದರಿಕೆ ಆಗುತ್ತದೆ? ಜನರ ಹಣವನ್ನು ಲೂಟಿ ಹೊಡೆದು ಆಮೇಲೆ ಗೊಡ್ಡು ಬೆದರಿಕೆ ಎಂದರೆ ಹೇಗೆ?. ತನಿಖಾ ವರದಿಯನ್ನು ಆಧರಿಸಿ ಸರಕಾರ ಕಾನೂನು ರೀತಿಯಲ್ಲಿ ಕ್ರಮಕ್ಕೆ ಮುಂದಾಗಲಿದೆ ಎಂದು ತಿಳಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News