‘ರಂಗ ಪರಿಷೆʼ ಅರ್ಥಪೂರ್ಣವಾಗಿ ನಡೆಸಿ : ಸಿಎಂ ಸಿದ್ದರಾಮಯ್ಯ
Update: 2025-01-04 13:18 GMT
ಬೆಂಗಳೂರು: ‘ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಶನಿವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ವೆಬ್‍ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಮಾತನಾಡಿದ ಅವರು, ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಈ ದಿಕ್ಕಿನಲ್ಲಿ ಎಲ್ಲ ಅಕಾಡೆಮಿಗಳು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಏನೇ ಹೊಸ ಪ್ರಯತ್ನ ಮಾಡಿದರೂ ಸರಕಾರ ಬೆಂಬಲವಾಗಿ ನಿಲ್ಲುತ್ತದೆ. ಅಕಾಡೆಮಿಗೆ ಅಗತ್ಯವಾದ ಹಣಕಾಸಿನ ನೆರವನ್ನು ಒದಗಿಸಲು ಸರಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ಭರವಸೆ ನೀಡಿದರು.