ಭಾರತದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿ ಇಲ್ಲದ ಸ್ಥಿತಿ ಬಂದಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಒಂದು ಅಧ್ಯಯನ ವರದಿಯಂತೆ ನಮ್ಮ ದೇಶದ 100 ಕೋಟಿ ದೇಶದ ಜನರಿಗೆ ಕೊಂಡುಕೊಳ್ಳುವ ಶಕ್ತಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ವಿಧಾನಪರಿಷತ್ತಿನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ ಮಾತನಾಡಿದ ಅವರು, ದೇಶದ 14 ಕೋಟಿ ಜನರ ಸರಾಸರಿ ವಾರ್ಷಿಕ ಆದಾಯ 15 ಸಾವಿರ ಡಾಲರ್(13 ಲಕ್ಷ ರೂ.), 7 ಕೋಟಿ ಕುಟುಂಬಗಳ ತಲಾ ಆದಾಯ 3 ಸಾವಿರ ಡಾಲರ್(2.62 ಲಕ್ಷ ರೂ.) 20.5 ಕೊಟಿ ಕುಟುಂಬಗಳ 100 ಕೋಟಿ ಜನರು ತಲಾ ಆದಾಯ 1 ಸಾವಿರ ಡಾಲರ್(ತಿಂಗಳಗೆ ಸುಮಾರು 7 ಸಾವಿರ ರೂ.), ಈ ವರ್ಗದವರಲ್ಲಿ ತಮ್ಮ ಅಗತ್ಯಗಳನ್ನು ಪೂರೈಸಲು ಹಣವಿರುವುದಿಲ್ಲ ಎಂದರು.
143 ಕೋಟಿ ಜನ ಮುಖ್ಯವಾಹಿನಿಗೆ ತರುವ ವ್ಯವಸ್ಥೆಯೇನು? ಈ ದಿಸೆಯಲ್ಲಿ ಅಂತಹ ಜನರಿಗೆ ಆರ್ಥಿಕ ಸಾಮಾಜಿಕ ಸಮಾನತೆ ತರಲು ನಮ್ಮ ಸರಕಾರ ಮಾಡಿರುವ ಪ್ರಮಾಣಿಕ ಪ್ರಯತ್ನ ಈ ಗ್ಯಾರಂಟಿ ಯೋಜನೆಗಳು ಎಂದು ಅವರು ತಿಳಿಸಿದರು.
ವಿರೋಧಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದ್ದಾರೆ. ಸರಕಾರದಲ್ಲಿ ಗ್ಯಾರಂಟಿಗಳಿಂದ ಸರಕಾರದಲ್ಲಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ಸರಕಾರ ಫೆಬ್ರವರಿ ಅಂತ್ಯದಲ್ಲಿ 76,509 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2024-25 ರಲ್ಲಿ 52,009 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ ಇಡಲಾಗಿದ್ದು, ಅದರಲ್ಲಿ 41,560 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅವರು ತಿಳಿಸಿದರು.