44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ
Update: 2024-02-28 17:02 GMT
ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 44 ಮಂದಿ ಪಕ್ಷದ ಕಾರ್ಯಕರ್ತರಿಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಕಲ್ಪಿಸಲು ನಿರ್ಧರಿಸಿದ್ದಾರೆ.
ಪಕ್ಷದ ಕಾರ್ಯಕರ್ತರ ಹೆಸರುಗಳನ್ನು ಅಂತಿಮಗೊಳಿಸಿದ್ದು, ಆ ಪಟ್ಟಿಯನ್ನು ಸಿದ್ದರಾಮಯ್ಯ ಅವರು ಅನುಮೋದಿಸಿ ಆಯಾ ಇಲಾಖೆಗಳಿಗೆ ರವಾನೆ ಮಾಡಿದ್ದಾರೆ.
ನಾಳೆ(ಫೆ.29) ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದು ಸಿಎಂ ಕಚೇರಿ ಮೂಲಗಳು ದೃಢಪಡಿಸಿವೆ.