ಯುಗಾದಿ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

Update: 2025-03-30 12:13 IST
Photo of Siddaramaiah

ಸಿದ್ದರಾಮಯ್ಯ 

  • whatsapp icon

ಬೆಂಗಳೂರು : ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನೋವು - ನಲಿವು, ಸೋಲು - ಗೆಲುವು, ಕಷ್ಟ - ಸುಖಗಳ ಜೀವನದ ಸಂದೇಶ ಸಾರುವ ಹಬ್ಬವೇ ಯುಗಾದಿ. ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ, ಭರವಸೆಯೊಂದಿಗೆ ಮುನ್ನಡೆಯೋಣ ಎಂದು ಹೇಳಿದರು. 

ಬೇವಿನಂತಹ ಕಹಿ ಅನುಭವಗಳಿಂದ ಕಲಿತ ಪಾಠವು ಬೆಲ್ಲದಂತಹ ಸಿಹಿ ಬದುಕಿಗೆ ಮುನ್ನುಡಿಯಾಗಲಿ. ಯುಗದ ಆದಿಯು ನಾಡಿನಲ್ಲಿ‌ ಸುಖ, ಶಾಂತಿ ಸಮೃದ್ಧಿಯನ್ನು ತರಲಿ‌ ಎಂದು ಹಾರೈಸುತ್ತೇನೆ. ನಾಡಿನ ಸಮಸ್ತರಿಗೂ ಯುಗಾದಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News