ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Update: 2025-01-14 17:00 GMT

ಬೆಂಗಳೂರು : ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ವಿಶಿಷ್ಟವಾಗಿ ಹೊರತಂದಿರುವ 2025ನೆ ಸಾಲಿನ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ಗಿ ಹಬ್ಬ ಸಂಕ್ರಾಂತಿಯ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಯ ಸರಕಾರಿ ನಿವಾಸ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಂಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು.

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ತುಂಬಾ ಸಂತೋಷದಿಂದ ಬರುತ್ತೇನೆ. ಆದರೆ ನನಗೆ ತುಸು ಸಮಯ ಕೊಡಿ ಎಂದು ಹೇಳಿದರು. ಬಜೆಟ್ ಹಿನ್ನೆಲೆಯಲ್ಲಿ ಸ್ವಲ್ಪ ಕೆಲಸದ ಒತ್ತಡ ಹೆಚ್ಚಿದೆ ಎಂದು ಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ತಿಳಿಸಿದರು.

ಇದೇ ವೇಳೆ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಶಾಸಕ ರಘುಮೂರ್ತಿ ಅವರೂ ಪತ್ರಕರ್ತರ ಸಹಕಾರ ಸಂಘಕ್ಕೆ ಶುಭ ಹಾರೈಸಿದರು. ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ರಮೇಶ್ ಪಾಳ್ಯ, ಉಪಾಧ್ಯಕ್ಷ ದೊಡ್ಡ ಬೊಮ್ಮಯ್ಯ, ಖಜಾಂಚಿ ಬಿ.ಮೋಹನ್ ಕುಮಾರ್, ನಿರ್ದೇಶಕರಾದ ವಿನೋದ್ ಕುಮಾರ್ ಬಿ.ನಾಯ್ಕ್, ರಮೇಶ್ ಹಿರೇಜಂಬೂರು, ಕೆ.ವಿ.ಪರಮೇಶ್, ಆನಂದ್ ಬೈದನಮನೆ, ಪಿ.ಎಸ್.ಕೃಷ್ಣಕುಮಾರ್, ನಯನಾ ಸೇರಿದಂತೆ ಸಂಘದ ನಿರ್ದೇಶಕರು, ಕಾರ್ಯದರ್ಶಿ ಕೆಂಪರಾಜು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News