ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರು

Update: 2024-01-03 16:38 GMT

ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳುವ ಮೂಲಕ ಹಿಂದೂ-ಮುಸ್ಲಿಮರಲ್ಲಿ ವೈಷಮ್ಯ ಸೃಷ್ಠಿಸುವ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್‍ಮೋಹನ್ ಅವರಿಗೆ ದೂರು ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಪ್ರತಿಭಟನೆ ನಡೆಸುವ ವೇಳೆಯಲ್ಲಿ ರಾಜ್ಯದಲ್ಲಿ ಕರಸೇವಕರನ್ನು ಕಾಂಗ್ರೆಸ್ ಸರಕಾರ ಉದ್ದೇಶಪೂರ್ವಕವಾಗಿ ಬಂಧಿಸುತ್ತಿದೆ ಎಂದು ಹೇಳಿಕೆ ನೀಡಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ ಅವರ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆಯಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸಿರುವ ಪೊಲೀಸರ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಆದೇಶವನ್ನು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿಜಯೇಂದ್ರ ಅವರು ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳುವ ಮೂಲಕ ಹಿಂದೂ-ಮುಸ್ಲಿಮರಲ್ಲಿ ಕೋಮುಗಲಭೆ ಸೃಷ್ಠಿಸುವ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಬೇಕು ಎಂದು ಎಸ್.ಮನೋಹರ್ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News