ಜ.18ಕ್ಕೆ ತುಮಕೂರಿನಲ್ಲಿ ಪತ್ರಕರ್ತರ ಸಮ್ಮೇಳನ

Update: 2025-01-15 16:47 GMT

ಶಿವಾನಂದ ತಗಡೂರು

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 39ನೆ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಜ.18 ಮತ್ತು 19 ರಂದು ತುಮಕೂರಿನಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಬುಧವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ಶತಮಾನೋತ್ಸದತ್ತ ಮುನ್ನಡೆಯುತ್ತಿದ್ದು, ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವವುಳ್ಳ ದೇಶದ ಏಕೈಕ ಬೃಹತ್ ಸಂಘಟನೆಯಾಗಿದೆ. ಕಾರ್ಯಕ್ರಮದಲ್ಲಿ ಪತ್ರಕರ್ತರು ಸೇರಿದಂತೆ ನ್ಯೂಸ್ ರೂಂನ ಎಲ್ಲ ಆಯಾಮಗಳ ಕುರಿತು ಚಿಂತನ-ಮಂಥನ ಮಾಡುವುದು, ಈ ಮೂಲಕ ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳನ್ನು ಕಾಣುವುದು ಸಮ್ಮೇಳನದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ ಎಂದರು.

ಜ.18ರ ಬೆಳಗ್ಗೆ 8:30ಕ್ಕೆ ತುಮಕೂರಿನ ಟೌನ್‍ಹಾಲ್ ಬಿಜಿಎಸ್ ವೃತ್ತದಿಂದ ಪತ್ರಕರ್ತರ ಸಾಂಸ್ಕೃತಿಕ ಮೆರಗಿನ ಮೆರವಣಿಗೆಯನ್ನು ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಈ ಸಮಾರಂಭಗಳಲ್ಲಿ ಡಾ.ಶಿವಾನಂದ ಶಿವಾಚಾರ್ಯಸ್ವಾಮಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಡಾ.ವಿರೇಶಾನಂದ ಸರಸ್ವತಿ ಸ್ವಾಮಿ, ಸ್ವಾಮಿ ಜಪಾನಂದಜೀ ಸಾನಿಧ್ಯ ವಹಿಸಲಿದ್ದಾರೆ. ನಂತರ ಡಾ.ಶಿವಕುಮಾರ ಸ್ವಾಮೀಜಿ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವರಾದ ಕೆ.ಎನ್.ರಾಜಣ್ಣ, ಎಚ್.ಕೆ.ಪಾಟೀಲ್, ಮಾಧ್ಯಮ ತಜ್ಞ ಜಿ.ಎನ್.ಮೋಹನ್, ಮುಖ್ಯಮಂತ್ರಿಗಳು ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೆÇನ್ನಣ್ಣ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಿವಾನಂದ ತಗಡೂರು ಮಾಹಿತಿ ನೀಡಿದರು. ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ದೇವರಾಜು, ಬೆಂಗಳೂರು ಘಟಕದ ಶಿವರಾಜು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News