ಕಾಂಗ್ರೆಸ್ ಸೇರ್ಪಡೆಯಾದ ಹಿಂದೂ ಮಹಾಸಭಾ ಮುಖಂಡ, ಬಿಜೆಪಿ ಸದಸ್ಯರು

Update: 2024-09-08 17:06 GMT

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ಅಧ್ಯಕ್ಷರಾಗಿದ್ದ ನಗರಸಭಾ ಸದಸ್ಯ ವಿ.ಕದಿರೇಶಿಯವರು ಶಾಸಕ ಬಿ.ಕೆ.ಸಂಗಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ರವಿವಾರ ಇಲ್ಲಿನ ಸಿಎಂ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಬಿಜೆಪಿ ಮುಖಂಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಇದೇ ವೇಳೆ ಬಿಜೆಪಿ ಹಿಂದುಳಿದ ವರ್ಗದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆ.ಮಂಜುನಾಥ್, ಬಿಜೆಪಿ ಹಾಲಿ ನಗರಸಭಾ ಸದಸ್ಯರಾದ ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ ಕಾಂಗ್ರೆಸ್ ಸೇರ್ಪಡೆಗೊಂಡರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News