ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಸಿಪಿಐ ಬೆಂಬಲ
ಬೆಂಗಳೂರು: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸರ್ವಾಧಿಕಾರಿ ಆಡಳಿತ ನಡೆಸಲು ಮುಂದಾಗಿರುವ ಮೋದಿ ನೇತೃತ್ವದ ಬಿಜೆಪಿ ಸರಕಾರವನ್ನು ಸೋಲಿಸಲು ಭಾರತ ಕಮ್ಯುನಿಸ್ಟ್ ಪಕ್ಷವು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ್ನು ಬೆಂಬಲಿಸಲಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟನೆ ನೀಡಿರುವ ಅವರು, ಹತ್ತು ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನತೆಯ ಪರವಾಗಿ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರೈತರ ಆದಾಯ ದ್ವಿಗುಣ, ಬೆಲೆ ಏರಿಕೆ ತಡೆಗಟ್ಟುವ, ಭ್ರಷ್ಟಾಚಾರ ನಿಯಂತ್ರಣ, ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಠಿ ಎಂಬ ಮೋದಿ ನೀಡಿರುವ ಎಲ್ಲ ಭರವಸೆಗಳು ಸುಳ್ಳಾಗಿವೆ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಹತಾಶೆಗೊಂಡಿರುವ ನರೇಂದ್ರ ಮೋದಿ ತಮ್ಮ ಚುನಾವಣೆ ಪ್ರಚಾರದಲ್ಲಿ ಮತೀಯ ಧ್ವೇಷ ಹರಡುವ ಭಾಷಣಗಳನ್ನು ಮಾಡುವ ಮೂಲಕ ಪ್ರಧಾನಿ ಸ್ಥಾನದ ಘನತೆಯನ್ನು ಮಣ್ಣಪಾಲು ಮಾಡುತ್ತಿದ್ದಾರೆ. ಅದಕ್ಕಾಗಿ ಲೋಕಸೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ದೇಶದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ತಿಳಿಸಿದ್ದಾರೆ.