ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಪಟ್ಟು
Update: 2024-12-23 12:05 GMT
ಬೆಂಗಳೂರು : ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಮಾನಹಾನಿ ಪದ ಬಳಕೆ ಮಾಡಿರುವ ಆರೋಪ ಸಂಬಂಧ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ.
ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ‘ನಾಲಿಗೆಯು ನಾಗರಿಕತೆಯನ್ನ ಹೇಳುತ್ತದೆ. ಜನಪ್ರತಿನಿಧಿಗಳಾದವರು ಸದನದ ಗೌರವ, ಘನತೆ ಕಾಪಾಡಬೇಕು. ಸದನದ ಒಳಗೆ ಹಾಗೂ ಹೊರಗೆ ಜನಪ್ರತಿನಿಧಿಗಳ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು’ ಎಂದು ಹೇಳಿದ್ದಾರೆ.
ಸಿ.ಟಿ.ರವಿ ಅವರು ಅಸಾಂವಿಧಾನಿಕ ಪದಬಳಕೆ ಮಾಡಿರುವುದು ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಿದೆ. ಸಿ.ಟಿ.ರವಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸರಕಾರವನ್ನು ಶಾಮನೂರು ಆಗ್ರಹಿಸಿದ್ದಾರೆ.