ಒಂದು ವಾರದೊಳಗೆ ಹೊಸ ಜಾಹೀರಾತು ನೀತಿ ಸಾರ್ವಜನಿಕ ಚರ್ಚೆಗೆ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-06-21 16:08 GMT

Photo :x/@DKShivakumar

ಬೆಂಗಳೂರು : "ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬಿಬಿಎಂಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,  "ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜೊತೆ ಚರ್ಚೆ ನಡೆಸಲಾಗಿದೆ" ಎಂದರು.

ʼ60 ಅಡಿಗಿಂತ ಹೆಚ್ಚು ಅಗಲ ಇರುವ ರಸ್ತೆಗಳಲ್ಲಿ 'ಗ್ರೂಪ್ ಪ್ಯಾಕೇಜ್' ತಯಾರಿಸಿ ಅವಕಾಶ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಜಾಹಿರಾತು ನೀಡಲು ಅವಕಾಶ ನೀಡಲಾಗುವುದು. ಕಟ್ಟಡಗಳ ವಿಸ್ತೀರ್ಣ, ಎತ್ತರಕ್ಕೆ ತಕ್ಕಂತೆ ಯೂನಿಫಾರ್ಮಿಟಿ ತರಲಾಗುವುದು. ಮನಬಂದಂತೆ ಹಾಕಲು ಅವಕಾಶವಿಲ್ಲ. ಫಲಕಗಳನ್ನು ಮಾಡಲು ಯಾವ ಗುಣಮಟ್ಟದ ವಸ್ತು ಬಳಸಬೇಕು ಎಂದು ನಂತರ ತಿಳಿಸಲಾಗುವುದು. ಸರ್ಕಾರದಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಹಿಂದಿನ ಸರ್ಕಾರ ಒಂದಷ್ಟು ಅವಕಾಶ ನೀಡಿದ್ದು, ಕಾನೂನು ಪ್ರಕಾರವಾಗಿ ಇದ್ದರೆ ರಕ್ಷಣೆ ಮಾಡಲಾಗುವುದು. ಏನೂ ಮಾಡದೆ ಇದ್ದವರನ್ನು ಕಾನೂನಿನ ಪ್ರಕಾರ ವಜಾ ಮಾಡಲಾಗುವುದುʼ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News