ಪಾಕ್ ಪರ ಘೋಷಣೆ | ನಾಸಿರ್​ ಹುಸೇನ್​​ ಅವರಿಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗಳಿಗೆ ನಿವೃತ್ತ IAS, IPS ಅಧಿಕಾರಿಗಳಿಂದ ಪತ್ರ

Update: 2024-03-07 12:40 GMT

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣದ ಹಿನ್ನೆಲೆಯಲ್ಲಿ ನೂತನ ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಕೋರಿ ಉಪ ರಾಷ್ಟ್ರಪತಿಯವರಿಗೆ ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಗುರುವಾರ ರಾಜ್ಯ ಸರಕಾರದ ನಿವೃತ್ತ ಅಧಿಕಾರಿಗಳಾದ ಮಧನ್ ಗೋಪಾಲ್, ಭಾಸ್ಕರ್ ರಾವ್ ಸೇರಿದಂತೆ 17 ಮಂದಿ ಇನ್ನಿತರ ಅಧಿಕಾರಿಗಳು ಈ ಸಂಬಂಧ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದಾರೆ. ಫೆ.27ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಸೈಯ್ಯದ್ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಈ ವೇಳೆ ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ್ದ ಆರೋಪ ಕೇಳಿಬಂದಿತ್ತು.

ಈ ಮಧ್ಯೆ ಘೋಷಣೆ ಪ್ರಕರಣ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ 3 ಮಂದಿ ಶಂಕಿತ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಮನವಿ ಮಾಡಲಾಗಿದೆ.

‘ದೇಶದ್ರೋಹಿಗಳನ್ನು ಪೋಷಿಸಿ, ಬೆಂಬಲಿಸಿ ಅವರು ರಾಷ್ಟ್ರ ವಿದ್ರೋಹದ ಪಾಪದ ಕೆಲಸ ಮಾಡಿದ ಮೇಲೂ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗೆ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಒಳಗೆ ಪ್ರವೇಶಿಸುವ ಅರ್ಹತೆಯೇ ಇಲ್ಲ. ಇಂತಹ ವ್ಯಕ್ತಿಗಳಿಗೆ ರಾಜ್ಯಸಭಾ ಸದಸ್ಯತ್ವ ನೀಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ದೇಶ ಪ್ರೇಮವಿದ್ದರೆ ನಾಸಿರ್ ಹುಸೇನ್ ರಾಜೀನಾಮೆ ಪಡೆದು ಮರುಚುನಾವಣೆ ನಡೆಸಬೇಕು’

ಆರ್.ಅಶೋಕ್ ಪ್ರತಿಪಕ್ಷ ನಾಯಕ


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News