ಬೆಂಗಳೂರು ದಕ್ಷಿಣ ಜಿಲ್ಲೆ ರಚನೆಗೆ ಆಗ್ರಹ: ಡಿಸಿಎಂ ನೇತೃತ್ವದ ನಿಯೋಗದಿಂದ ಸಿಎಂಗೆ ಮನವಿ
Update: 2024-07-09 06:00 GMT
ಬೆಂಗಳೂರು, ಜು.9: ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ವಿಧಾನಸೌಧದಲ್ಲಿ ಮಂಗಳವಾರ ಸಲ್ಲಿಸಿತು.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೈನ್, ಮಾಜಿ ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್. ರವಿ, ಸುಧಾಮ ದಾಸ್, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ಸಿ.ಎಂ.ಲಿಂಗಪ್ಪ, ರಾಜು, ಅಶ್ವತ್ಥ್ ಮತ್ತಿತರರು ಉಪಸ್ಥಿತರಿದ್ದರು.