ಎಸ್‍.ಎಂ.ಕೃಷ್ಣಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹ

Update: 2024-12-11 13:23 GMT

ಎಸ್.ಎಂ.ಕೃಷ್ಣ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ರಾಜ್ಯ ಸರಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂಬುದು ನಮೆಲ್ಲರ ಒತ್ತಾಸೆಯಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಎಂ ಕೃಷ್ಣ ಅವರು ಆರು ದಶಕಗಳ ಸುದೀರ್ಘ ಅವಧಿಗೆ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿದ್ದವರು. ತಾವು ಅಲಂಕರಿಸಿದ ಹುದ್ದೆಗಳಿಗೆ ನ್ಯಾಯ ಒದಗಿಸಿಕೊಟ್ಟ ಅವರು ಒಬ್ಬ ಶ್ರೇಷ್ಠ ರಾಜಕಾರಣಿ. ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರಕಾರವು ಈಚೆಗೆ ಪದವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಈಗ ರಾಜ್ಯ ಸರಕಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಿ ಎಂದರು.

1999 ರಿಂದ 2004 ಕೃಷ್ಣ ಅವರು ಮುಖ್ಯಮಂತ್ರಿಯಾಗಿ ನಾಡಿಗೆ ಸಲ್ಲಿಸಿದ ಸೇವೆ ಅವಿಸರಣೀಯ. ಸ್ತ್ರೀ ಶಕ್ತಿ, ಅಕ್ಷರ ದಾಸೋಹ, ರೈತರಿಗೆ ಪಹಣಿ ನೀಡುವ ಭೂಮಿ ಯೋಜನೆ, ಯಶಸ್ವಿನಿ ಯೋಜನೆ ಸಮಾಜದ ಸರ್ವ ಜನರನ್ನು ಸ್ಪರ್ಶಿಸಿ ಜನಮನ ಗೆದ್ದ ಯೋಜನೆಗಳಾಗಿದ್ದವು ಎಂದು ಅವರು ನುಡಿದರು.

ಐಟಿ ಬಿಟಿ ಕ್ಷೇತ್ರಕ್ಕೆ ಅಗಾಧ ಬೆಂಬಲ ನೀಡಿ ಬೆಂಗಳೂರು ನಗರದ ಬೆಳವಣಿಗೆಗೆ ಹಾಕಿಕೊಟ್ಟ ಭದ್ರ ಭೂನಾದಿಯಿಂದ ಜಾಗತಿಕ ಮಟ್ಟದಲ್ಲಿ ಬೆಂಗಳೂರು ಸಿಲಿಕಾನ್ ವ್ಯಾಲಿ ಎಂದು ಹೆಸರು ಗಳಿಸಿ ಅಮೇರಿಕಾದ ಕ್ಯಾಲಿಪೊರ್ನಿಯಾ ನಗರಕ್ಕೆ ಪರ್ಯಾಯವಾಗಿ ಹೆಸರು ಗಳಿಸಿತ್ತು. ಇಂದು ರಾಜ್ಯದ ಆಯವ್ಯಯ ಮೂರು ಲಕ್ಷ ಕೋಟಿ ರೂ. ದಾಟಿದ್ದರೆ ಅದಕ್ಕೆ ಕೃಷ್ಣ ಅವರು ಐಟಿ ಕ್ಷೇತ್ರಕ್ಕೆ ನೀಡಿದ ಅವಕಾಶಗಲೇ ಕಾರಣ ಎಂದು ಹೇಳಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News