ಮಕ್ಕಳೊಂದಿಗೆ ನಾಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಾದ

Update: 2024-11-13 20:59 IST
Photo of DK Shivakumar

ಡಿ.ಕೆ.ಶಿವಕುಮಾರ್ 

  • whatsapp icon

ಬೆಂಗಳೂರು : ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾಳೆ(ನ.14) ಮಕ್ಕಳ ಸಂವಾದವನ್ನು ಆಯೋಜಿಸಲಾಗಿದೆ.

ಬಿಬಿಎಂಪಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನ.14ರ ಬೆಳಗ್ಗೆ 9 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ-334ರಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಈ ಸಂವಾದ ಏರ್ಪಡಿಸಲಾಗಿದೆ. ಈ ಸಂವಾದದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸಹಿತ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮಕ್ಕಳ ದಿನಾಚರಣೆಯಂದು ನೆಹರು ಅವರನ್ನು ಸ್ಮರಿಸುವುದರ ಜೊತೆಗೆ, ಭವಿಷ್ಯದ ಕರ್ನಾಟಕ ನಿರ್ಮಾಣಕ್ಕೆ ಮಕ್ಕಳಿಂದ ಸಲಹೆಗಳನ್ನು ಪಡೆಯುವುದು ಕಾರ್ಯಕ್ರಮದ ಉದ್ದೇಶ. ಸರಕಾರಿ ಶಾಲೆಗಳ ಮಕ್ಕಳನ್ನು ಸಂವಾದಕ್ಕೆ ಆಹ್ವಾನಿಸಿದ್ದು, ಭವಿಷ್ಯದ ಕರ್ನಾಟಕಕ್ಕಾಗಿ ಸಂವಾದ ನಡೆಸಿ, ಅವರಿಂದ ಬರುವ ಸಲಹೆಗಳನ್ನು ಸರಕಾರ ರೂಪಿಸುವ ಯೋಜನೆಗಳಲ್ಲಿ ಅಳವಡಿಸಿಕೊಳ್ಳುವ ಉದ್ದೇಶದೊಂದಿಗೆ ಈ ಸಂವಾದ ಏರ್ಪಡಿಸಲಾಗಿದೆ ಎಂದು ತಿಳಿಸಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News