ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಸೂಲಿಬೆಲೆ ವಿರುದ್ಧದ ಎಫ್‍ಐಆರ್ ಗಳಿಗೆ ಹೈಕೋರ್ಟ್ ತಡೆ
ಕಲಬುರಗಿ,: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ನಮೋ ಬ್ರಿಗೇಡ್‍ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರ ವಿರುದ್ಧ ದಾಖಲಾಗಿದ್ದ ಎಫ್‍ಐಆರ್ ಗಳಿಗೆ ಹೈಕೋರ್ಟ್‍ನ ಕಲಬುರಗಿ ಪೀಠ ತಡೆಯಾಜ್ಞೆ ನೀಡಿದೆ.
ಇತ್ತೀಚೆಗೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಆಯೋಜಿಸಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಖರ್ಗೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನ ವಿವಿಧ ಜಿಲ್ಲಾ ಘಟಕಗಳು ಅಧ್ಯಕ್ಷರು ಸೂಲಿಬೆಲೆ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ ಎಫ್‍ಐಆರ್ ದಾಖಲಿಸಿದ್ದರು.
ಇವುಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸೂಲಿಬೆಲೆ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ರಾಜೇಂದ್ರ ಬಾದಾಮಿಕರ್ ನೇತೃತ್ವದ ನ್ಯಾಯಪೀಠವು, ಯಾರ ಜಾತಿ ನಿಂದನೆ ಆಗಿದೆಯೋ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠವು ಎಫ್‍ಐಆರ್ ಗಳಿಗೆ ತಡೆಯಾಜ್ಞೆ ನೀಡಿತು.