ಆಹಾರ ನೈರ್ಮಲ್ಯ, ಸುರಕ್ಷತಾ ಮಾನದಂಡ ಹೆಚ್ಚಿಸುವುದು ಸರಕಾರದ ಆದ್ಯತೆ : ದಿನೇಶ್ ಗುಂಡೂರಾವ್
Update: 2024-12-04 13:54 GMT
ಬೆಂಗಳೂರು: ರಾಜ್ಯದಲ್ಲಿ ಆಹಾರ ನೈರ್ಮಲ್ಯ ಮತ್ತು ಸುರಕ್ಷತಾ ಮಾನದಂಡಗಳನ್ನು ಹೆಚ್ಚಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಬೀದಿ ವ್ಯಾಪಾರಿಗಳ ಸಂಘ ಸಹಯೋಗದೊಂದಿಗೆ ಆಯೋಜಿಸಿದ್ದ ‘ಸರ್ವ್ ಸೇಫ್ ಫುಡ್’ ಕಾರ್ಯಕರ್ಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಜೆಕ್ಟ್ ಸರ್ವ್ ಸೇಫ್ ಫುಡ್ ಬೀದಿ ಬದಿ ಆಹಾರ ಮಾರಾಟಗಾರರ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ. ನೈರ್ಮಲ್ಯ ಮತ್ತು ಆಹಾರ ಸುರಕ್ಷತಾ ಪದ್ಧತಿಗಳ ಕುರಿತು ಸೂಕ್ತವಾದ ತರಬೇತಿ ನೀಡಿ ಕೌಶಲ್ಯಗಳನ್ನು ಸುಧಾರಿಸುವ ಮೂಲಕ ಬೀದಿ ಆಹಾರ ಮಾರಾಟಗಾರರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ಯೋಜನೆ ಕಾರ್ಯನಿರ್ವಹಿಸುತ್ತಿದೆ ಎಂದರು.