ಜನಕಲ್ಯಾಣ ಸಮಾವೇಶಕ್ಕೆ ಸಕಲ ಸಿದ್ಧತೆ : DK Sivakumar

Update: 2024-12-04 16:32 GMT

ಬೆಂಗಳೂರು : ‘ಹಾಸನದ ಅರಸೀಕೆರೆ ರಸ್ತೆಯಲ್ಲಿನ ಎಸ್ಸೆಂ ಕೃಷ್ಣ ಬಡಾವಣೆಯಲ್ಲಿನ ಆಟದ ಮೈದಾನದಲ್ಲಿ ಸ್ವಾಭಿಮಾನಿಗಳ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ನಾಳೆ(ಡಿ.5) ‘ಜನಕಲ್ಯಾಣ ಸಮಾವೇಶ’ಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮಾವೇಶಕ್ಕೆ ಯಾರೇ ಬಂದರೂ ಸಂತೋಷ. ಎಲ್ಲ ವರ್ಗದ ಜನರ ಬೆಂಬಲದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿದೆ. ನಾವು ಈ ಕಾರ್ಯಕ್ರಮಕ್ಕಾಗಿ ಎಲ್ಲರಿಗೂ ಆಹ್ವಾನ ನೀಡಿದ್ದೇವೆ. ಈ ಸಮಾವೇಶವನ್ನು ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ಸ್ಪಷ್ಟಣೆ ನೀಡಿದರು.

ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಮಳೆ ಬರುವುದು ಬೇಡ ಎಂದು ನಾನು ಹೇಳುವುದಿಲ್ಲ. ಮಳೆ ಬಂದರೆ ಏನೂ ಮಾಡಲು ಸಾಧ್ಯವಿಲ್ಲ. ಅದು ಪ್ರಕೃತಿ. ಪಕ್ಷದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ನಮ್ಮ ಸಮಾವೇಶ ಯಶಸ್ವಿಯಾಗುತ್ತದೆ ಎಂದು ಪ್ರತಿಪಕ್ಷ ಬಿಜೆಪಿಯವರು ಇಲ್ಲಸಲ್ಲದ ವಿಚಾರವನ್ನು ಮಾಧ್ಯಮಗಳ ಮೂಲಕ ಹರಿಬಿಡುತ್ತಿದ್ದಾರೆ ಎಂದು ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News